ಕುಂದಾಪುರ (ಏ.05): ಕುಂದಾಪುರದ ಪ್ರತಿಷ್ಠಿತ ವಿದ್ಯಾ ಸಂಸ್ಥೆ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರತೀತ್ ಎನ್.ಶೆಟ್ಟಿ ಅಖಿಲ ಭಾರತ ಮಟ್ಟದ ಅಂತರ್ ವಿಶ್ವವಿದ್ಯಾನಿಲಯ ಪುರುಷರ ವಿಭಾಗದ ಕಿಕ್ ಬಾಕ್ಸಿಂಗ್ ಸ್ಪರ್ಧೆಗೆ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸುತ್ತಿದ್ದು , ಅವರನ್ನು ಬೈಂದೂರಿನ ಶಾಸಕರು ಹಾಗೂ ಕುಂದಾಪುರ ಎಜುಕೇಶನ್ ಸೊಸೈಟಿಯ ಅಧ್ಯಕ್ಷರಾದ ಶ್ರೀ. ಬಿ. ಎಮ್. ಸುಕುಮಾರ ಶೆಟ್ಟಿಯವರು ಸ್ಪರ್ಧೆಯಲ್ಲಿ ವಿಜಯಶಾಲಿ ಬರಲು ಶುಭಹಾರೈಸಿದರು.

ಈ ಸಂಧರ್ಭದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಂಜಿತ್ ಟಿ.ಎನ್.ಉಪಸ್ಥಿತರಿದ್ದರು. ಇದೇ ಏ. 20 ರಿಂದ 23 ರವರೆಗೆ ಉತ್ತರ ಪ್ರದೇಶದ ಡಾ. ಆರ್. ಎಂ. ಎಲ್ ಯೂನಿವರ್ಸಿಟಿ ಅಯೋಧ್ಯೆಯಲ್ಲಿ ಸ್ಪರ್ಧೆ ನಡೆಯಲಿದೆ.












