ಮಧುವನ ( ಏ.07): ಇ ಸಿ ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ಸ್ ನರ್ಸಿಂಗ್ ಕಾಲೇಜಿನ ಆಶ್ರಯದಲ್ಲಿ ‘ವಿಶ್ವ ಆರೋಗ್ಯ ದಿನಾಚರಣೆ’ ಯ ಅಂಗವಾಗಿ ಏ.07 ರಂದು ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.

ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಅಧಿಕಾರಿಗಳಾದ ಕುಮಾರಿ ಮನೀಷಾ ಮತ್ತು ಮ್ಯಾನೇಜ್ಮೆಂಟ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಆಕಾಶ್ ಸಾವಳಸಂಗ್ ಅವರು ಭಾಗವಹಿಸಿದ್ದರು.

ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಟರಾಜ ಕೆ ಮಾತನಾಡಿ ವಿದ್ಯಾರ್ಥಿಗಳಿಗೆ ವಿಶ್ವ ಆರೋಗ್ಯ ದಿನದ ಮಹತ್ವವನ್ನು ತಿಳಿಸಿದರು, ವಿದ್ಯಾರ್ಥಿನಿ ಕುಮಾರಿ ದಿವ್ಯ ಸ್ವಾಗತ ನೃತ್ಯದ ಮೂಲಕ ಸ್ವಾಗತಿಸಿದರು. ನಂತರ ನರ್ಸಿಂಗ್ ವಿದ್ಯಾರ್ಥಿಗಳು ಕಿರುನಾಟಕದ ಮೂಲಕ ಸಭಿಕರಲ್ಲಿ ಆರೋಗ್ಯದ ಕುರಿತು ಜಾಗೃತಿ ಮೂಡಿಸಿದರು. ಉಪನ್ಯಾಸಕರಾದ ಶ್ರೀ ಪವನ್ ನಾಯಕ್, ಶ್ರೀಮತಿ ರೂಪಶ್ರೀ ಕೆ ಎಸ್, ವಿದ್ಯಾರ್ಥಿಗಳು, ಸೈಬರಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಯ ಸಿಬ್ಬಂದಿ ವರ್ಗ ಹಾಗೂ ಅಲ್ಲಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನರ್ಸಿಂಗ್ ವಿದ್ಯಾರ್ಥಿನಿ ಕುಮಾರಿ ವೈಷ್ಣವಿ ಯಾದವ್ ವಂದಿಸಿದರು, ನರ್ಸಿಂಗ್ ವಿದ್ಯಾರ್ಥಿ ಕುಬೇರ ಪಾಟೀಲ್ ಕಾರ್ಯಕ್ರಮವನ್ನು ನಿರೂಪಿಸಿದರು.










