ಕೋಟೇಶ್ವರ(ಏ,21): ಬಿ.ಜೆ.ಪಿ ಕುಂದಾಪುರ ಮಂಡಲದ ಕೋಟೇಶ್ವರ ಮಹಾಶಕ್ತಿ ಕೇಂದ್ರದ ಕಾರ್ಯಕಾರಿಣಿ ಸಭೆ ಕೋಡಿ ಕಿನಾರದ ಶೆಣೈ ರೆಸಾರ್ಟ್ ನಲ್ಲಿ ಇತ್ತೀಚೆಗೆ ನಡೆಯಿತು. ಕೋಟೇಶ್ವರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣ ಗೊಲ್ಲ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕುಂದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಮಾತನಾಡಿ ಚುನಾವಣೆ ದೃಷ್ಟಿಯಿಂದ ಪಕ್ಷ ಸಂಘಟನೆ ಬೂತ್ ಮಟ್ಟದಲ್ಲಿ ಬಲಪಡಿಸಿ ಸಶಕ್ತ ಬೂತ್ ಸಧೃಡ ಭಾರತ ಎಂಬ ಪಕ್ಷದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗ ಬೇಕು,ಜೊತೆಗೆ ಬೂತ್ ಮಟ್ಟದಲ್ಲಿ ಸರ್ಕಾರದ ವಿವಿಧ ಯೋಜನೆಯನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು, ಸ್ಥಳೀಯ ಜನಪ್ರತಿನಿಧಿಗಳು ನಿರಂತರವಾಗಿ ಸಾರ್ವಜನಿಕರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ತಿಳಿಸಿದರು.
ಮಂಡಲ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ,ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಗೋಪಾಡಿ, ಸತೀಶ್ ಪೂಜಾರಿ ವಕ್ವಾಡಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಕೋಟೇಶ್ವರ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ, ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಬಾಣ, ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಗೋಪಾಲ ಕಲಂಜಿ,ಕೋಟೇಶ್ವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಶ್ರೀಮತಿ ರಾಗಿಣಿ ದೇವಾಡಿಗ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಾಗೆಯೇ ಶಕ್ತಿ ಕೇಂದ್ರದ ಅಧ್ಯಕ್ಷರು,ವಿವಿಧ ಮೋರ್ಚಾದ ಪದಾಧಿಕಾರಿಗಳು, ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯಿತಿ ಸದಸ್ಯರು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ವಂದೇ ಮಾತರಂ ಗೀತೆಯನ್ನು ಮಂಡಲದ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಸಂಗಮ್ ಹಾಡಿದರು. ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ನಾಗರಾಜ್ ಆಚಾರ್ಯ ನಿರೂಪಿಸಿದರು, ಕಾರ್ಯದರ್ಶಿ ರಮೇಶ್ ಪೈ ವಂದನಾರ್ಪಣೆಗೈದರು.