ಬಂಟಕಲ್(ಏ.22) : ಇಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ
ಶಿಬಿರವನ್ನು ಎಪ್ರಿಲ್ 18 ರಂದು ಎಸ್ವಿಎಚ್ ಪದವಿಪೂರ್ವ ಕಾಲೇಜು ಇನ್ನಂಜೆಯಲ್ಲಿ ಉದ್ಘಾಟನೆಗೊಂಡಿತು.
ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕ ಆಚಾರ್ಯ ರ ವರು ಒಂದು ವಾರದ ಎನ್ಎಸ್ಎಸ್ ಶಿಬಿರವನ್ನು ದೀಪ ಬೆಳಗಿಸುವ ಮೂಲಕ
ಉದ್ಘಾಟಿಸಿ ಶಿಬಿರದ ವಿವಿಧ ಕಾರ್ಯಕ್ರಮಗಳನ್ನು ನಡೆಸಲು ತಮ್ಮ ಸಹಕಾರ ನೀಡುವುದಾಗಿ ಶಿಬಿರಾರ್ಥಿಗಳಿಗೆ ಹೇಳಿದರು.
ಇನ್ನಂಜೆ ಎಸ್ವಿಎಚ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪುಂಡರೀಕಾಕ್ಷ ಕೊಡoಚ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಅವರು ಇಂತಹ ಶಿಬಿರಗಳನ್ನು ಆಯೋಜಿಸಿದ ತಮ್ಮ ಅನುಭವವನ್ನು ಹಂಚಿಕೊoಡರು ಮತ್ತು ಶಿಬಿರಗಳಲ್ಲಿ ಭಾಗವಹಿಸುವುದರ ಪ್ರಯೋಜನವನ್ನು ತಿಳಿಸಿದರು. ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಇಂತಹ ಶಿಬಿರಗಳನ್ನು ಆಯೋಜಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು. ಉತ್ತಮ ಕಲಿಕೆಯ ಅನುಭವಕ್ಕಾಗಿ ಇಂತಹ ವೇದಿಕೆಯನ್ನು ಬಳಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಇದರ ಕಾರ್ಯದರ್ಶಿಗಳಾದ ಶ್ರೀರತ್ನಕುಮಾರ್ ಅವರು ಮಾತನಾಡಿ ಎನ್ಎಸ್ಎಸ್ ಘಟಕವು ಕಳೆದ ಹಲವು ವರ್ಷಗಳಿಂದ ನಡೆಸುತ್ತಿರುವ ವಿವಿಧ ಸೇವಾ ಚಟುವಟಿಕೆಗಳನ್ನು ಶ್ಲಾಘಿಸಿದರು. ಭವಿಷ್ಯದಲ್ಲಿಯೂ ಇಂತಹ ಕಾರ್ಯಕ್ರಮಗಳು ನಡೆಯುವಂತೆ ಆಶಿಸಿದರು.
ಉಪಪ್ರಾಂಶುಪಾಲರಾದ ಡಾ.ಗಣೇಶ್ ಐತಾಳ್, ರೋಟರಿ ಶಂಕರಪುರ ಇದರಅಧ್ಯಕ್ಷರಾದ ರೋ|ಫ್ಲಾವಿಯಾ ಮೆನೆಜಸ್ ಮತ್ತು ಕಾರ್ಯದರ್ಶಿ ರೋ|ಮಾಲಿನಿ ಶೆಟ್ಟಿ, ಸೋದೆ ಶ್ರೀ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಸಮೂಹ ವಿದ್ಯಾಸಂಸ್ಥೆಗಳ ಸಿಬ್ಬoದಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಂಯೋಜಕರಾದ ಶ್ರೀ ನಾಗರಾಜ್ ರಾವ್ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರೀರಕ್ಷಾ
ಪ್ರಾರ್ಥಿಸಿದರು. ಅನನ್ಯಾ ನಿರೂಪಿಸಿದರು.