ಭಾರತ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಭಾಗವಹಿಸುವಿಕೆ ಪ್ರಮುಖವಾದದ್ದು, ಆ ನಿಟ್ಟಿನಲ್ಲಿ ದೇಶದ ಸಂವಿಧಾನ ಜನತೆಗೆ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬ ಪ್ರಜೆಯೂ ಪ್ರಜ್ಞಾವಂತರಾಗಿ ಚಲಾಯಿಸಿದಾಗ ಮಾತ್ರ ಸದೃಢ ಭಾರತವನ್ನು ನಿರ್ಮಿಸಲು ಸಾಧ್ಯ ಎಂದು ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಚುನಾವಣಾ ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಹೇಳಿದರು. ಅವರು ಕಾಲೇಜಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಮಹತ್ವದ ಕುರಿತು ಮಾತನಾಡಿದರು. ಅದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್. ಸಿ .ಸಿ. ಅಧಿಕಾರಿ ಶಿವರಾಜ್ .ಸಿ .ನಾವುಂದ, ಗುರು ಕುಂದಾಪುರ ಹಾಗೂ ಕಾಲೇಜಿನ ಬೋಧಕ – ಭೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.