ಕುಂದಾಪುರ (ಮೇ,22): ತಮಿಳುನಾಡಿನ ಕಡಲೂರಿನ ಅಣ್ಣಾ ಸ್ಟೇಡಿಯಂನಲ್ಲಿ ಮೇ 21 ಹಾಗೂ 22 ರಂದು ನೆಡೆದ 41 ನೇ ರಾಷ್ಟ್ರೀಯ ಕ್ರೀಡಾ ಕೂಟದಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿರುವ ಕುಂದಾಪುರದ ಪ್ರಶಾಂತ್ ಶೆಟ್ಟಿ ಯವರು 800 ಮೀ ಓಟದ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ಟ್ರಿಪಲ್ ಜಂಪ್ ವಿಭಾಗದಲ್ಲಿ ಕಂಚಿನ ಪದಕ ಪಡೆದು ಕರ್ನಾಟಕದ ಹಿರಿಮೆಯನ್ನು ಮುಗಿಲೆತ್ತರಕ್ಕೆ ಏರಿಸಿದ್ದಾರೆ.
ಕುಂದಾಪುರದ ಓಕ್ ವುಡ್ ಇಂಡಿಯನ್ ಸ್ಕೂಲ್ ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿರುವ ಇವರು ತಮ್ಮದೇ ಆದ ಕುಂದಾಪುರ ಟ್ರಾಕ್ & ಫಿಲ್ಡ್ ಸಂಸ್ಥೆಯನ್ನು ಹುಟ್ಟುಹಾಕಿ ಯುವ ಕ್ರೀಡಾಪಟುಗಳಿಗೆ ತರಭೇತಿ ನೀಡುತ್ತಿದ್ದಾರೆ .ಹಾಗೆಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ದೈಹಿಕ ಕ್ಷಮತೆಗೆ ಸಂಭಂಧಿಸಿದ ತರಭೇತಿಯನ್ನು ಸಹ ನೀಡುತ್ತಿದ್ದಾರೆ.