ಉಡುಪಿ (ಮೇ, 31): ಬoಟಕಲ್ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 12 ನೇ ವರ್ಷದವಾರ್ಷಿಕೋತ್ಸವವು ಮೇ 29 ರಂದು ಸಂಸ್ಥೆಯ ಆವರಣದಲ್ಲಿ ಜರಗಿತು.
ಕುಕ್ಕೆ ಶ್ರೀ ಸುಬ್ರಮಣ್ಯ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಅತ್ಯುತ್ತಮ ಇಂಜಿನಿಯರಿoಗ್ ಶಿಕ್ಷಣ ನೀಡುತ್ತಿರುವ ಕಾಲೇಜನ್ನು ಸ್ಥಾಪಿಸಿದ ಸೋದೆ ಶ್ರೀಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಜಾಗೃತಿಯನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು.
ಉಡುಪಿ ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಅಧ್ಯಕ್ಷತೆ ವಹಿಸಿದ್ದರು. ಇವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಾತನಾಡುತ್ತಾ, ಪ್ರತಿಯೊಬ್ಬ ವಿದ್ಯಾರ್ಥಿಗೂ ವಿದ್ಯಾರ್ಥಿ ಜೀವನ ಸುವರ್ಣ ಸಮಯ, ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ಕಾರ್ಯಕ್ರಮದ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಇವರು ವಿದ್ಯಾರ್ಥಿಗಳು ವಿಷಯದ ಕುರಿತು ಪ್ರೀತಿಯನ್ನು ಬೆಳೆಸಿಕೊಂಡಲ್ಲಿ, ಆ ವಿಷಯದಲ್ಲಿ ಪ್ರಾವೀಣ್ಯತೆ ಹೊಂದಬಹುದೆoದು ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ತಮ್ಮ ಕಾಲೇಜು ದಿನಗಳಲ್ಲಿ ಶ್ರಮವಹಿಸಿ ಕಲಿತು ಗುರಿ ಸಾಧಿಸಬೇಕೆಂದು ಕರೆ ನೀಡಿದರು.
ಕರ್ನಾಟಕ ರಾಜ್ಯದ ಮಾನ್ಯ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಆರ್ ಗುರುರಾಜನ್ ಅವರು ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸೋದೆ ಶ್ರೀಗಳ ಸಾರಥ್ಯದಲ್ಲಿ ಈ ಸಂಸ್ಥೆಯು ಉನ್ನತ ಮಟ್ಟಕ್ಕೆ ಏರಲಿದೆ ಎಂದು ಅಭಿಪ್ರಾಯಪಟ್ಟರು. ಭಾರತ ಸಂವಿಧಾನದ ಆರ್ಟಿಕಲ್-21 ರ ಉದ್ದೇಶ ಉತ್ತಮ ಶಿಕ್ಷಣ ಸಂಸ್ಥೆಗಳ ಸ್ಥಾಪನೆಯಿಂದ ಗುರುಗಳ ಆಶಯ ಹೇಗೆ ಈಡೇರಲಿದೆ ಎಂದು ವಿವರಿಸಿದರು.
ಗೌತಮ ಫೌಂಡೇಶನ್ನಿoದ ನೀಡಲ್ಪಟ್ಟ ವಿದ್ಯಾರ್ಥಿವೇತನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಅಂತಿಮ ವರ್ಷದ ಉತ್ತಮ ಸಾಧಕ ವಿದ್ಯಾರ್ಥಿಗಳಿಗೆ ಕೊಡುವ “ಶ್ರೀ ಮಧ್ವ ವಾದಿರಾಜ ಪ್ರಶಸ್ತಿ”ಯನ್ನು ಗಣಕಯಂತ್ರ ವಿಭಾಗದ ಭಾರ್ಗವ್ರಾಮ್ ಉಡುಪ ಟಿ ಮತ್ತು ಸಿವಿಲ್ ಇಂಜಿನಿಯರಿoಗ್ ವಿಭಾಗದ ಜಾಹ್ನವಿ ವಿ ನಿಲೇಕಣಿ ಇವರಿಗೆ ನೀಡಿ ಗೌರವಿಸಲಾಯಿತು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಪ್ರತಿಷ್ಠಾನ ಇದರ ಉಪಾಧ್ಯಕ್ಷರಾದ ಶ್ರೀ ಶ್ರೀನಿವಾಸ ತಂತ್ರಿ, ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್, ಆಡಳಿತ ಮಂಡಳಿ ಸದಸ್ಯರಾದ ಶ್ರೀ ಹರೀಶ್ ಬೆಳ್ಮಣ್, ಶ್ರೀ ಶ್ಯಾಮ ಸುಂದರ್, ಕಾಲೇಜಿನ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲರಾದ ಡಾ. ಗಣೇಶ್ ಐತಾಳ್ ಮತ್ತು ವಿದ್ಯಾರ್ಥಿ ಕೌನ್ಸಿಲ್ನ ಪ್ರಧಾನ ಕಾರ್ಯದರ್ಶಿ ನಿಖಿಲ್ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಸೋದೆ ವಾದಿರಾಜ ಮಠ ಶಿಕ್ಷಣ ಟ್ರಸ್ಟ್, ಉಡುಪಿ ಇದರ ಕಾರ್ಯದರ್ಶಿಗಳಾದ ಶ್ರೀ ರತ್ನಕುಮಾರ್ರವರು ಅಭ್ಯಾಗತರನ್ನು ಹಾಗೂ ಆಮಂತ್ರಿತರನ್ನು ಸ್ವಾಗತಿಸಿದರು. ಪ್ರಾಂಶುಪಾಲರಾದ ಪ್ರೊ. ಡಾ. ತಿರುಮಲೇಶ್ವರ ಭಟ್ರವರು ಸಂಸ್ಥೆಯ ವಾರ್ಷಿಕ ವರದಿಯನ್ನು ವಾಚಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ವಂದನಾರ್ಪಣೆ ಮಾಡಿದರು. ಡೀನ್ ಡಾ.ಸುದರ್ಶನ್ ರಾವ್ ವಿದ್ಯಾರ್ಥಿ ವೇತನವನ್ನು ಪಡೆದವರ ವಿವರವನ್ನು ನೀಡಿದರು. ರಂಜನಿ ಸಾಮಗ ಇವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮವನ್ನು ಪ್ರಾಧ್ಯಾಪಕರಾದ ಶ್ರೀಮತಿ ಧನ್ಯ ಶೆಣೈ ಮತ್ತು ಕುಮಾರಿ ಸ್ವಾತಿ ನಿರೂಪಿಸಿದರು.