ಕುಂದಾಪುರ (ಜೂ,5): ನಮ್ಮ ನೆಲೆದ ಕಲೆ ,ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಮಹತ್ತರವಾದ ಜವಾಬ್ದಾರಿ ನಮ್ಮ ಮೇಲಿದೆ .ಆ ನಿಟ್ಟಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿನ ಪ್ರತಿಷ್ಠಿತ ಕಾಲೇಜುಗಳಲ್ಲೊಂದಾದ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಅಯೋಜಿಸುವ ಮಹತ್ವಪೂರ್ಣ ಕಾರ್ಯಕ್ರಮಗಳು ಶ್ಲಾಘನೀಯ ಎಂದು ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಅಧ್ಯಕ್ಷರಾದ ಶ್ರೀ ಭಾಸ್ಕರ ಕೊಗ್ಗ ಕಾಮತ್ ಹೇಳಿದರು.
ಅವರು ಜೂನ್03 ರಂದು ಕುಂದಾಪುರದ ಆರ್.ಎನ್. ಶೆಟ್ಟಿ ಕಲ್ಯಾಣ ಭವನದಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಮ್ಮಿಕೊಂಡ ಪ್ರತಿಭಾ ಪ್ರದರ್ಶ ದಿನವನ್ನು ಉದ್ಘಾಟಿಸಿ ಮಾತನಾಡಿದರು.ಶಿಕ್ಷಣದೊಂದಿಗೆ ಕಲೆ ಬೆರೆತಾಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ,ಗೊಂಬೆಯಾಟದ ಮೂಲಕ 22 ರಾಷ್ಟ್ರಗಳನ್ನು ಸುತ್ತು ವಂತಾಗಲು ಈ ನೆಲೆದ ಸಂಸ್ಕೃತಿ ಹಾಗೂ ಕಲೆಯೇ ಕಾರಣ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ಕಾರ್ಕಳದ ಶಿಕ್ಷಕಿ, ನೃತ್ಯ ನಿರೂಪಕಿ ವಂದನಾ ರೈ ಮಾತನಾಡಿ, ವಿದ್ಯಾರ್ಥಿ ಜೀವನದ ಮಹತ್ವದ ಬಗ್ಗೆ ತಿಳಿಸಿದರು. ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಕೆ.ಸೀತಾರಾಮ ನಕ್ಕತ್ತಾಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಉಮೇಶ್ ಶೆಟ್ಟಿ ಕೊತ್ತಾಡಿ ಶುಭಶಂಸನೆಯ ನುಡಿಗಳನ್ನಾಡಿದರು.
ಕಾರ್ಯಕ್ರಮದ ಸಂಯೋಜಕರಾದ ಉಪನ್ಯಾಸಕರಾದ ರಕ್ಷಿತ್ ರಾವ್, ಶುಭಾ ಅಡಿಗ, ರೇವತಿ ಖಾರ್ವಿ, ತೀರ್ಪುಗಾರರಾಗಿ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಕುಂದಾಪುರ ಕಚೇರಿ ಅಧೀಕ್ಷಕ ರಮೇಶ ಕುಲಾಲ್, ಆಲೂರು ಶಾಲೆಯ ಸಹಶಿಕ್ಷಕ ಉದಯ ಶೆಟ್ಟಿ ಉಪಸ್ಥಿತರಿದ್ದರು.
ಉಪನ್ಯಾಸಕ ರಾಜೇಶ್ ಶೆಟ್ಟಿ ಸ್ವಾಗತಿಸಿದರು. ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕಿ ವಿನಿತಾ ಎಸ್.ಗಾಣಿಗ ಮತ್ತು ದೀಪಾ ಪೂಜಾರಿ, ಅತಿಥಿಗಳನ್ನು ಪರಿಚಯಿಸಿದರು.ಉಪನ್ಯಾಸಕ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು.
ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಣೆಗೈದರು.