ಮಂಗಳೂರು (ಜೂ,7):ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಶ್ರೀ ಆನೆಗುಂದಿ ಮಠ ಸೂರ್ಯಚೈತನ್ಯ ಶಾಲಾ ಸಭಾಂಗಣದಲ್ಲಿ ಜೂ,04ರಂದು ಶ್ರೀ ಆನೆಗುಂದಿ ಮೂಲಗುರು ಪರಂಪರಾ ಪರಮ ಪೂಜ್ಯನೀಯ ಜಗದ್ಗುರುಗಳ ದಿವ್ಯ ಉಪಸ್ಥಿಯಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. “ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ. ಸೂರ್ಯ ಚೈತನ್ಯ ಹೈಸ್ಕೂಲ್ ಮುಂದಿನ ವರ್ಷಗಳಲ್ಲಿ ಮಾದರಿ ಶಾಲೆಯಾಗಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಅತ್ಯುನ್ನತ ಸಾಧನೆ ತೋರುತ್ತದೆ” ಎಂದು ಶ್ರೀಗಳು ನುಡಿದರು.
ವೇದಿಕೆಯಲ್ಲಿ ಶ್ರೀ ಮೋಹನ್ ಕುಮಾರ್ ಬೆಳ್ಳೂರು, ಪ್ರಾಂಶುಪಾಲ ಗುರುದತ್ ಸೋಮಯಾಜಿ, ಶಾಲೆಯ ಅಧ್ಯಾಪಕ ವೃಂದ, ಶ್ರೀ ಶಂಭುದಾಸ್ ಗುರೂಜಿ , ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೀ ಲೋಕೇಶ್ ಆಚಾರ್ಯ ಕಂಬಾರ್, ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನ್ ಟ್ರಸ್ಟ್ (ಅಸೆಟ್) ನ ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ವಿವೇಕ್ ಆಚಾರ್ಯ ಶಿರ್ವ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕೋಶಾಧ್ಯಕ್ಷರಾದ ಶ್ರೀ ಸೂರ್ಯಕುಮಾರ್ ಹಳೆಯಂಗಡಿ , ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಗುರುರಾಜ ಆಚಾರ್ಯ ಮಂಗಳೂರು, ಪೋಷಕರು, ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಪಾಲ್ಗೊಂಡಿದ್ದರು. ಆಡಳಿತ ಮಂಡಳಿ ಹಾಗೂ ಪೋಷಕರ ಜೊತೆ ಶೈಕ್ಷಣಿಕ ಸಂವಾದ, ತದನಂತರ ಶಾಲಾಭಿವೃದ್ಧಿಗೆ ಆಡಳಿತ ಮಂಡಳಿ ಕೈಗೊಂಡ ಯೋಜನೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಶಿಕ್ಷಕಿ ರಾಜಲಕ್ಷ್ಮಿ ಅಜಯ್ ಕಾರ್ಯಕ್ರಮ ನಿರೂಪಿಸಿದರು.