ಕುಂದಾಪುರ (ಜೂ,10): ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ 2021-22 ನೇ ಸಾಲಿನ ವಾರ್ಷಿಕ ಕ್ರೀಡಾಕೂಟ ಮೇ,27ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ನಡೆಯಿತು. ಬೈಂದೂರು ಶಾಸಕ ,ಕುಂದಾಪುರ ಎಜುಕೇಶನ್ ಸೊಸೈಟಿ (ರಿ) ಇದರ ಅಧ್ಯಕ್ಷರಾದ ಶ್ರೀ ಬಿ. ಎಂ. ಸುಕುಮಾರ ಶೆಟ್ಟಿಯವರು ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಶೈಕ್ಷಣಿಕ ,ಸಾಹಿತ್ಯ ,ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಡಾ.ಬಿ.ಬಿ.ಹೆಗ್ಡೆ ಕಾಲೇಜು ಸರ್ವತೋಮುಖ ಬೆಳವಣಿಗೆಯನ್ನು ಕಾಣುತ್ತಿದ್ದು ,ವಿದ್ಯಾರ್ಥಿಗಳ ಕಲಿಕಾ ಆಸಕ್ತಿಗೆ ಪೂರಕವಾದ ಅವಕಾಶವನ್ನು ಸಂಸ್ಥೆ ಕಲ್ಪಿಸುತ್ತಿದೆ ಎಂದು ಅವರು ಹೇಳಿದರು.
ಕುಂದಾಪುರ ಎಜುಕೇಶನ್ ಸೊಸೈಟಿ (ರಿ)ಯ ಕಾರ್ಯದರ್ಶಿಗಳಾದ ಶ್ರೀ ಸೀತಾರಾಮ ನಕ್ಕತಾಯ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಕೆ ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಚೈತ್ರ ವಂದಿಸಿದರು.ವಾಣಿಜ್ಯ ಉಪನ್ಯಾಸಕ ಸತೀಶ್ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.
ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ತರಗತಿವಾರು ಆಕರ್ಷಕ ಪಥಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.