ಕುಂದಾಪುರ(ಜೂ,10) : ಹೋಲಿ ರೋಜರಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕುಂದಾಪುರ ವಲಯ ಅರಣ್ಯ ಇಲಾಖೆಯ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಜೂ .04 ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿ ಹಾಗೂ ಕುಂದಾಪುರ ತಾಲೂಕು ಗ್ರಾಮ ಲೆಕ್ಕಾಧಿಕಾರಿಗಳಾಗಿರುವ ಕಾಂತರಾಜ್ರವರು ವಿದ್ಯಾರ್ಥಿಗಳಿಗೆ ಸಸಿಗಳನ್ನು ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಕುಂದಾಪುರ ಉಪವಲಯ ಅರಣ್ಯ ಅಧಿಕಾರಿ ಹಸ್ತ ಶೆಟ್ಟಿ ವಿದ್ಯಾರ್ಥಿಗಳಿಗೆ ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಕಾರ್ಯವೇನು? ಗಿಡಗಳನ್ನು ಏಕೆ ನಾವು ಬೆಳೆಸಬೇಕು? ಎನ್ನುವ ಕುರಿತು” ಅರಿವು ಮೂಡಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ತೆರೆಜ್ ಶಾಂತಿಯವರು ಅಧ್ಯಕ್ಷೀಯ ನೆಲೆಯ ಮಾತುಗನ್ನಾಡಿದರು.
ವಿದ್ಯಾರ್ಥಿನಿ ರೋಹಿಣಿ ಕಾರ್ಯಕ್ರಮಅ ನಿರೂಪಿಸಿದರು. ವಿದ್ಯಾರ್ಥಿನಿ ಪ್ರಿನ್ಸಿಯ ಮೊಂತೆರೋ ಸ್ವಾಗತಿಸಿದರು ಹಾಗೂ ವಿದ್ಯಾರ್ಥಿನಿ ಸಾನ್ವಿ ಎಸ್ ವಂದಿಸಿದರು.