ಕುಂದಾಪುರ (ಜೂ,19): ಮಂಗಳೂರು ವಿಶ್ವವಿದ್ಯಾನಿಲಯದಿಂದ ಬಿ.ಸಿ.ಎ. ಪದವಿಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಜೂ ,12ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಆಯೋಜಿಸಲಾಯಿತು.
ಬಿ.ಸಿ.ಎ. ವಿಭಾಗದ ಪ್ರಥಮ ರ್ಯಾಂಕ ಗಳಿಸಿದ ಸಾಧಕಿ ದೇವಾಡಿಗ ಕಾವ್ಯ ಹಾಗೂ ನಾಲ್ಕನೇಯ ರ್ಯಾಂಕ್ ಗಳಿಸಿದ ಸುಮಧುರ ಶೆಟ್ಟಿ ಇವರಿಗೆ ಮುಖ್ಯ ಅತಿಥಿಗಳಾದ ಶ್ರೀ ಮಹಾಬಲೇಶ್ವರ ಎಮ್.ಎಸ್., ಎಮ್.ಡಿ ಮತ್ತು ಸಿ.ಇ.ಒ. ಕರ್ನಾಟಕ ಬ್ಯಾಂಕ್ ಮಂಗಳೂರು ಸನ್ಮಾನಿಸಿದರು . ಹಾಗೆಯೇ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಐ.ಎ.ಎಸ್. ಮತ್ತು ಐ.ಪಿ.ಎಸ್. ಸಾಧಕರಾಗಿರಿ ಹಾಗೂ ನಿಮ್ಮ ಅಭಿವೃದ್ಧಿಯ ಪ್ರತಿಯೊಂದು ಹಂತದಲ್ಲೂ ಆಸಕ್ತಿ ಹೊಂದಿರಿ ಎಂದು ಹೇಳಿದರು.
ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಬೈಂದೂರು ಕ್ಷೇತ್ರದ ಶಾಸಕರಾದ ಶ್ರೀ ಬಿ.ಎಮ್. ಸುಕುಮಾರ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ವಿಶ್ವಸ್ಥ ಮಂಡಳಿಯ ಕಾರ್ಯದರ್ಶಿ ಕೆ. ಸೀತಾರಾಮ್ ನಕ್ಕತ್ತಾಯ, ಸದಸ್ಯರಾದ ಶ್ರೀ ಅರುಣ್ ಕುಮಾರ್ ಶೆಟ್ಟಿ ಮತ್ತು ಶ್ರೀ ಸುಧಾಕರ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರು. ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.