ಕುಂದಾಪುರ(ಜೂ,27): ಮಾದಕವಸ್ತು ಸೇವನೆಯು ಯುವಜನತೆಯ ಭವಿಷ್ಯಕ್ಕೆ ಮಾರಕವಾಗಿದೆ.ಈ ವ್ಯಸನದಿಂದ ಸಂಪೂರ್ಣ ದೂರವಿರುವ ಜೊತೆಗೆ ಮಾದಕ ವ್ಯಸನ ಸಂಬಂಧಿತ ಪ್ರಬಲ ಕಾನೂನುಗಳ ಕುರಿತು ಅರಿವು ಹೊಂದಿರಬೇಕು ಎಂದು ಕುಂದಾಪುರದ ಪೋಲಿಸ್ ಠಾಣಾಧಿಕಾರಿ ಶ್ರೀ ಸದಾಶಿವ ಗವರೋಜಿ ಹೇಳಿದರು.

ಅವರು ಕುಂದಾಪುರದ ಆರ್. ಎನ್ ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಮಾದಕವ್ಯಸನ ವಿರೋಧಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ್ ಶೆಟ್ಟಿ ಮಾತನಾಡಿ ಮಾದಕವ್ಯಸನ ಪಿಡುಗಿನ ಗಂಭೀರ ಪರಿಣಾಮದ ಬಗ್ಗೆ ಜಾಗ್ರತರಾಗಬೇಕೆಂದು ತಿಳಿಸಿದರು.
ಹಿಂದಿ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಜಯಶೀಲ ಪೈ ಅತಿಥಿಗಳಿಗೆ ಪುಷ್ಪ ನೀಡಿ ಗೌರವಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ಶ್ರೀ ಕ್ರಷ್ಣಮೂರ್ತಿ ಡಿ.ಬಿ ಕಾರ್ಯಕ್ರಮ ನಿರ್ವಹಿಸಿದರು.











