ಗಂಗೊಳ್ಳಿ (ಜು,15): ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದ ಮೈದಾನದಲ್ಲಿ ಗಿಡಗಳನ್ನು ನೆಡುವ ಮೂಲಕ ವನಮೋತ್ಸವ ಕಾರ್ಯಕ್ರಮವನ್ನು ಇತ್ತೀಚೆಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ,ಕಾರ್ಯದರ್ಶಿ ಚಂದ್ರಕಲಾ ಟಿ. ಮತ್ತು ರೋಟರಿ ಕ್ಲಬ್ ಸದಸ್ಯರಾದ ಲಕ್ಷ್ಮಿಕಾಂತ್ ಮಡಿವಾಳ, ನಾರಾಯಣ ನಾಯ್ಕ್, ಜನಾರ್ದನ ಪೆರಾಜೆ,ರಾಮನಾಥ ನಾಯಕ್, ಗಿರೀಶ್ ಖಾರ್ವಿ ಮೊದಲಾದವರು ಉಪಸ್ಥಿತರಿದ್ದರು.










