ಕುoದಾಪುರ 🙁 ಜು,21) : ಕಾಲೇಜಿಗೆ ಸ್ಥಳದಾನ ಮಾಡಿದ ಸಂಸ್ಥೆಯ ಮಹಾಪೋಷಕರಾದ ಡಾ| ಬಿ. ಬಿ. ಹೆಗ್ಡೆಯವರ ಧರ್ಮಪತ್ನಿ ವಿಶಾಲಾಕ್ಷಿ ಬಿ. ಹೆಗ್ಡೆಯವರ ಸಂಸ್ಮರಣಾ ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಪ್ರೊ| ಕೊತ್ತಾಡಿ ಉಮೇಶ್ ಶೆಟ್ಟಿಯವರು ದೀಪ ಪ್ರಜ್ವಲಿಸಿ-ಪುಷ್ಪಾರ್ಚನೆ ಗೈದು, ಸಂಸ್ಮರಣಾ ನುಡಿಗಳನ್ನಾಡಿದರು. ವಿಭಾಗದ ಮುಖ್ಯಸ್ಥರು ಹಾಗೂ ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು.
ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಪ್ರವೀಣಾ ಪೂಜಾರಿ ವಂದಿಸಿ, ಸುಕುಮಾರ್ ಶೆಟ್ಟಿ ಕಮಲಶಿಲೆ ನಿರೂಪಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲಾ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಪುಷ್ಪಾರ್ಚನೆಗೈದರು.