ಉಡುಪಿ (ಆ,07): 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವ್ʼ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಉಡುಪಿಯ ಸರಕಾರಿ ಪದವಿ ಪೂರ್ವ ಕಾಲೇಜು, ಮಲ್ಪೆಯಲ್ಲಿ ದಿನಾಂಕ : ಆಗಸ್ಟ್ 3 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಇವರನ್ನು ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.