ಕುಂದಾಪುರ (ಆ,26): ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಪ್ರೌಢಶಾಲೆಗಳ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ತಾಲೂಕು ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ, ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳೀಯ ಸಂಸ್ಥೆ ಕುಂದಾಪುರ ಇವರ ಸಂಯುಕ್ತಾಶ್ರಯದಲ್ಲಿ ಕುಂದಾಪುರದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ದೇಶಭಕ್ತಿಗೀತಗಾಯನ ಸ್ಪರ್ಧೆಯಲ್ಲಿ ಎಚ್.ಎಮ್.ಎಮ್ ನ 4ನೇ ತರಗತಿಯ ಬುಲ್ ಬುಲ್ ವಿದ್ಯಾರ್ಥಿನಿ ಸಂಹಿತಾ ತಂತ್ರಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಹಾಗೆಯೇ ಪ್ರೌಢಶಾಲೆಯ ಗೈಡ್ಸ್ ವಿದ್ಯಾರ್ಥಿಗಳಾದ ಕ್ಷಮಾ, ವಿಧಾತ್ರಿ, ನಮಿತಾ, ಸುನೀತಾ, ಜಯಶ್ರೀ, ಕೀರ್ತನಾ, ಅನುಷ್ಕಾ ಮತ್ತು ಶ್ರೇಯ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸ್ಕೌಟ್ಸ್ ವಿದ್ಯಾರ್ಥಿಗಳಾದ ಏಳನೇ ತರಗತಿಯ ಕೌಸ್ತುಬ್ ಉಡುಪ, ನಿರಂಜನ್ ಉಡುಪ, ಸಾತ್ವಿಕ್, ಶ್ರವಣ್, ಅರುಷ್ ಮತ್ತು 5ನೇ ತರಗತಿಯ ತ್ರಿಶೂಲ್, ಶಮಂತ್, ಪ್ರಣವ್ ಎಸ್ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಶಿಕ್ಷಕರಾದ ವೀರೇಂದ್ರ ನಾಯಕ್, ರೇಖಾ ಕೆ.ಯು, ಮತ್ತು ಸಂಗೀತ ಶಿಕ್ಷಕ ಪ್ರಕಾಶ್ ರವರಿಂದ ತರಬೇತಿಗೊಂಡು ವಿಜೇತರಾದ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರಾದ ಶುಭಾ ಕೆ.ಎನ್ ಮತ್ತು ಜಗದೀಶ್ ಆಚಾರ್ ಸಾಸ್ತಾನ ಅಭಿನಂದಿಸಿದ್ದಾರೆ.