ಕುಂದಾಪುರ(ಆ,26): ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿಯವರ ನೇತೃತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ನಾಲ್ಕು ದಿನಗಳ ಕಾಲ ಕೊಲ್ಲೂರು ದೇವಳದ ಕಾಳಿದಾಸ ಭಟ್ ರವರ ನಿವಾಸದಲ್ಲಿ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿಕಾಯಾಗ ನಡೆಯಿತು.
ಚಂಡಿಕಾ ಯಾಗದಿಂದ ಸರ್ವರಿಗೂ ಒಳಿತಾಗಲಿ, ನಾಡಿನ ಜನತೆಗೆ ಸುಭೀಕ್ಷವಾಗಲಿ, ತಾಯಿ ಮೂಕಾಂಬಿಕೆ ಸನ್ನಿಧಿಯಲ್ಲಿ ಮಾಡುವ ಈ ಸೇವೆಯಿಂದ ಸಂತೃಪ್ತಿ ಇದೆ ಎಂದು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.
ರಾಜ್ಯದ ವಿವಿಧ ಭಾಗಗಳಿಂದ ಗಣ್ಯರು ಹಾಗೂ ಭಕ್ತರು ಆಗಮಿಸಿದ್ದರು. ವಿಶೇಷವಾಗಿ ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಇಲಾಖೆ ಸಚಿವ ವಿ. ಸುನೀಲ್ ಕುಮಾರ್, ಬಿಜೆಪಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ.ಅತುಲ್ ಕುಮಾರ್ ಶೆಟ್ಟಿ, ಗೋಪಾಲಕೃಷ್ಣ ನಾಡ,ಶ್ರೀಮತಿ ರತ್ನಾ ರಮೇಶ್ ಕುಂದರ್, ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಹಾಗೂ ಶಂಭು ಶೆಟ್ಟಿ, ಪ್ರೇಮಾನಂದ ಶೆಟ್ಟಿ ಕಟ್ಕೆರೆ, ಬಿಜೆಪಿ ಮುಖಂಡರಾದ ರೋಹಿತ್ ಶೆಟ್ಟಿ, ಶರತ್ ಶೆಟ್ಟಿ ಉಪ್ಪುಂದ, ಇಂದಿರಾ ಶೆಟ್ಟಿ ಆಲೂರು, ಮಂಜು ಬಿಲ್ಲವ, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ. ಹಾಗೂ ಪಕ್ಷದ ಕಾರ್ಯಕರ್ತರು ಆಗಮಿಸಿದ್ದರು.