ಮಂಗಳೂರು(ಆ,26): ಕ್ರಿಯೇಟಿವ್ ಪಿ.ಯು ಕಾಲೇಜು, ಕಾರ್ಕಳ ಸಂಸ್ಥೆಯ ವಾಣಿಜ್ಯ ವಿದ್ಯಾರ್ಥಿಗಳಿಗಾಗಿ “ಕೈಗಾರಿಕಾ ಭೇಟಿ” ಕಾರ್ಯಕ್ರಮವನ್ನು ಆ .23 ರಂದು ಆಯೋಜಿಸಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮಂಗಳೂರಿನ ಕೆ.ಎಂ.ಎಫ್ ಕೈಗಾರಿಕೆಗೆ ಭೇಟಿ ನೀಡಿ ಕೈಗಾರಿಕೆಯಲ್ಲಿನ ಹಾಲು ಉತ್ಪಾದನಾ ಘಟಕದ ಪ್ರಕ್ರೀಯೆಗಳು, ಹಂತಗಳು ಉತ್ಪಾದನಾ ವಿಧಾನಗಳು ಹಾಗೂ ಉತ್ಪನ್ನಗಳ ಬಗ್ಗೆ ಸವಿಸ್ಥಾರವಾದ ಮಾಹಿತಿಯನ್ನು ಸಂಗ್ರಹಿಸಿದರು.
ಬದುಕಿನಲ್ಲಿ ಪಠ್ಯದ ಜ್ಞಾನದ ಜೊತೆಗೆ ಪಠ್ಯದಲ್ಲಿನ ವಿಷಯಗಳ ಪ್ರಾಯೋಗಿಕ ಜ್ಞಾನವು ಮಹತ್ತರವಾದದು ಹಾಗೂ ಒಬ್ಬ ಯಶಸ್ವಿ ಉದ್ಯಮದಾರನ್ನಾಗಿಸಲು ಸಹಾಯವಾಗಬಹುದು ಎಂಬುದು ಸಂಸ್ಧೆಯ ಆಶಯ. ಈ ಹಿನ್ನೆಲೆಯಲ್ಲಿ ಪಠ್ಯದ ಜೊತೆಗೆ ಅನೇಕ ಪಠ್ಯೇತರ ಚಟುವಟಿಕಗಳನ್ನು ಹಮ್ಮಿಕೊಳ್ಳುತ್ತಾ ಬಂದಿರುವುದು ಸಂಸ್ಥೆಯ ವಿಶೇಷ.
ಇಂದಿನ ಜಗತ್ತಿನಲ್ಲಿ ನಾವು ನವೀನ ಉಪಕರಣಗಳನ್ನು ಬಳಸುತ್ತಿದ್ದೇವೆ. ಸಾಂಪ್ರದಾಯಕ (ಹಳೆಯ) ಉತ್ಪನ್ನಗಳು ಮರೆಯಾಗುತ್ತಿವೆ. ಹಳೆಯ ಸಂಪ್ರದಾಯಕ ಕೃಷಿ ಮತ್ತು ಕೃಷಿಯೇತರ ಸಲಕರಣೆಗಳನ್ನು ವೀಕ್ಷಿಸುವ ಸಲುವಾಗಿ ವಿದ್ಯಾರ್ಥಿಗಳನ್ನು ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿನ ಗುತ್ತಿನ ಮನೆಗೆ ಭೇಟಿ ನೀಡಿಸಲಾಗಿತ್ತು ಇಲ್ಲಿನ ಹಳೆಯ ಗುತ್ತಿನ ಮನೆ, ದೈವದ ಮೂರ್ತಿಗಳು, ಕತ್ತಿ, ಅಕ್ಕಿಮುಡಿ, ತಿರಿ, ಜನಪದ ಕಲೆಗಳಾದ ಕೋಲ, ಯಕ್ಷಗಾನ ಇವುಗಳ ಪ್ರಾಮುಖ್ಯತೆಯನ್ನು ಮಕ್ಕಳಿಗೆ ವಿವರಿಸಲಾಯಿತು. ಒಟ್ಟಾರೆ ಇಂದಿನ ನಾಗಾಲೋಟದ ಪ್ರಪಂಚದಲ್ಲಿ ಹೊಸತನ್ನು ಅನುಭವಿಸುತ್ತಾ ಹಳೆಯದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡುತ್ತಾ ವಿದ್ಯಾರ್ಜನೆ ಮಾಡುವುದು ಈ ಸಂಸ್ಥೆಯ ವಿಶೇಷ. ಈ ಸಂದರ್ಭದಲ್ಲಿ ಸಂಸ್ಥೆಯ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್, ಉಮೇಶ್, ಚಂದ್ರಕಾಂತ್, ರಾಜೇಶ್ ಶೆಟ್ಟಿ, ಅಕ್ಷತಾ ಜೈನ್ ಹಾಗೂ ಭೋಧಕೇತರ ವೃಂದದವರು ಪಾಲ್ಗೊಂಡಿದ್ದರು.