ಹೆಮ್ಮಾಡಿ(ಸೆ,17): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಇವರು ಆಯೋಜಿಸಿದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿಯ ವಿದ್ಯಾರ್ಥಿಗಳು ಭಾಗವಹಿಸಿ ವ್ಯಯಕ್ತಿಕ ಸ್ಪರ್ಧಾ ವಿಭಾಗದಲ್ಲಿ ಪ್ರಮುಖವಾಗಿ ಅರೆಬಿಕ್ ಧಾರ್ಮಿಕ ಪಠಣ, ಚಿತ್ರಕಲೆ ಮತ್ತು ಬಣ್ಣ ಹಚ್ಚುವಿಕೆ,ಕನ್ನಡ ಮತ್ತು ಹಿಂದಿ ಭಾಷಣ, ರಂಗೋಲಿ, ಭಾವಗೀತೆ, ಜನಪದ ಗೀತೆ,ಭರತನಾಟ್ಯ, ಚರ್ಚೆ,ಗಝಲ್ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಸಂಸ್ಕ್ರತ ಧಾರ್ಮಿಕ ಪಠಣ ಹಾಗೂ ಮಿಮಿಕ್ರಿಯಲ್ಲಿ ದ್ವಿತೀಯ ಸ್ಥಾನ ಪಡೆದು, ಛದ್ಮವೇಷ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ತ್ರತೀಯ ಸ್ಥಾನ ಪಡೆದಿರುತ್ತಾರೆ.
ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಹಾಗೂ ಮುಂದಿನ ಹಂತದ ಸ್ಪರ್ಧೆಗಳಿಗೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೂ ಕಾಲೇಜು ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.