ಕುಂದಾಪುರ: ಶ್ರೀ ಶಾರದ ಕಾಲೇಜು ಬಸ್ರೂರು ಇದರ ಐಕ್ಯೂಎಸಿ, ಸ್ವೀಪ್ ಕಮಿಟಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25ರಂದು ಆಚರಿಸಲಾಯಿತು. ಸರಕಾರಿ ಪದವಿ ಪೂರ್ವ ಕಾಲೇಜು ಬಿದ್ಕಲ್ ಕಟ್ಟೆ ಇದರ ರಾಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ರಾಘವೇಂದ್ರ ಕಿಣಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಹಾಗೂ ಮತದಾರರ ಮಹತ್ವದ ಕುರಿತು ಮಾತನಾಡಿದರು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಭದ್ರಗೊಳಿಸುವಲ್ಲಿ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಹೇಳಿದರು. ಆ ನಿಟ್ಟಿನಲ್ಲಿ ಎನ್ಎಸ್ಎಸ್ ಘಟಕವು ಜನರಲ್ಲಿ ಮತದಾನದ ಕುರಿತು ಅರಿವು ಮೂಡಿಸಬೇಕು ಎಂದು ಅವರು ಹೇಳಿದರು .
ಕಾಲೇಜಿನ ಪ್ರಾಂಶುಪಾಲರಾದ ಡಾ ಚಂದ್ರಾವತಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕರಾದ ಶ್ರೀಪುರುಷೋತ್ತಮ ಬಲ್ಯಾಯ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಸ್ವೀಪ್ ಕಮಿಟಿಯ ಸಂಯೋಜಕರಾದ ವಿಶ್ವನಾಥ ಆಚಾರ್ಯ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪನ್ಯಾಸಕ ರಾಘವೇಂದ್ರ ಶೆಟ್ಟಿ ವಂದಿಸಿದರು, ವಿದ್ಯಾರ್ಥಿನಿ ಶುಭಶ್ರೀ ಕಾರ್ಯಕ್ರಮ ನಿರೂಪಿಸಿದರು.