ಕುಂದಾಪುರ(ಸೆ,20):ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಇವರು ಸೆಪ್ಟೆಂಬರ್ 17 ರಂದು ಉಡುಪಿಯ ಪೂರ್ಣ ಪ್ರಜ್ಞಾ ಕಾಲೇಜಿನಲ್ಲಿ ಆಯೋಜಿಸಿದ ಜಿಲ್ಲಾಮಟ್ಟದ ಕಾಲೇಜು ವಿದ್ಯಾರ್ಥಿಗಳ ಕರಾಟೆ ಸ್ಪರ್ಧೆಯಲ್ಲಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿಶೇಷ ಸಾಧನೆಗೈದಿದ್ದು, ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ ಪ್ರಥಮ ಸ್ಥಾನಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ಹಾಗೂ ವಿಜ್ಞಾನ ವಿಭಾಗದ ನಿಶಾನ್ ಮೆಸ್ತಾ ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿದ್ದು ಸಾಧಕರಿಗೆ ಎಂ.ಎo ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾಗಿರುವ ಎಂ. ಮಹೇಶ್ ಹೆಗ್ಡೆ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪಚಂದ್ರ ಶೆಟ್ಟಿ, ಖಜಾಂಚಿಯಾದ ಭರತ್ ಶೆಟ್ಟಿ, ಸಂಸ್ಥೆಯ ಬೋಧಕ, ಬೋಧಕೇತರ ವೃಂದದವರು ವಿದ್ಯಾರ್ಥಿಗಳಿಗೆ ಅಭಿನಂದಿಸಿದ್ದಾರೆ.