ಕುಂದಾಪುರ(ಸೆ,20): ಮಂಗಳೂರು ವಿಶ್ವ ವಿದ್ಯಾನಿಲಯದ ಅಂತರ್ ಕಾಲೇಜು ವಾರ್ಷಿಕ ಸಂಚಿಕೆ ಸ್ಪರ್ಧೆಯಲ್ಲಿ ಸತತ 4 ಬಾರಿ ಪ್ರಥಮ ಸ್ಥಾನವನ್ನು ಪಡೆದಿರುವ ಕುಂದಾಪುರದ ಡಾ | ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸಂಚಿಕೆ -ಶಿಖರ ಇದರ 2020-21 ನೆ ಸಾಲಿನ ಸಂಚಿಕೆ ಯನ್ನು ಕಾಲೇಜಿನ ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿಯವರು ಇತ್ತೀಚೆಗೆ ನಡೆದ ಕಾಲೇಜಿನ ವಾರ್ಷಿಕೋತ್ಸವದ ಸಭಾ ಕಾರ್ಯಕ್ರದಲ್ಲಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮoಗಳೂರಿನ ಡಾ| ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ನವೀನ್ ಶೆಟ್ಟಿ , ಬೆಂಗಳೂರಿನ ಅಲಯನ್ಸ್ ವಿಶ್ವವಿದ್ಯಾನಿಲಯದ ಹಿರಿಯ ನಿರ್ದೇಶಕಿ ಶ್ರೀಮತಿ ಸುರೇಖಾ ಶೆಟ್ಟಿ ,ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ , ಉಪಪ್ರಾಂಶುಪಾಲರಾದ ಚೇತನ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ,ಪ್ರಾಕ್ತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದೀಪ್ ಶೆಟ್ಟಿ ಆಜ್ರಿ ,ವಿದ್ಯಾರ್ಥಿ ಪ್ರತಿನಿಧಿ ಸುಷ್ಮಾ ಉಪಸ್ಥಿತರಿದ್ದರು.
ನಿರ್ವಾಹಕ ಸಂಪಾದಕರಾದ ಪ್ರವೀಣ ಮೊಗವೀರ ಗಂಗೊಳ್ಳಿ ಸಂಪಾದಕೀಯ ನೆಲೆಯ ಮಾತುಗಳನ್ನಾಡಿದರು. ಇಂಗ್ಲೀಷ್ ವಿಭಾಗದ ಮುಖ್ಯಸ್ಥೆ ದೀಪಿಕಾ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.