ಹೆಮ್ಮಾಡಿ(ಸೆ,21): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಪದವಿಪೂರ್ವ ಬಾಲಕ ಹಾಗೂ ಬಾಲಕಿಯರ ಕಬ್ಬಡಿ ಪಂದ್ಯಾಟದ ಉದ್ಘಾಟನಾ ಸಮಾರಂಭ ಸೆ.21 ರಂದು ನೆರವೇರಿತು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಮಾರುತಿಯವರು ಕಾರ್ಯಕ್ರಮ ಉದ್ಘಾಟಿಸಿ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಗೋಪಾಲ ಪೂಜಾರಿಯವರು ವಹಿಸಿ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಸೂಕ್ತ ಕ್ರೀಡಾ ಪ್ರತಿಭೆಗಳನ್ನು ಆಯ್ಕೆ ಮಾಡುವ ಕಾರ್ಯ ಮಾಡಬೇಕಾಗಿದೆ ಎಂದು ಶುಭ ಹಾರೈಸಿದರು.
ಸಮಾರಂಭದಲ್ಲಿ ಕೂಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿಯ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಶೆಟ್ಟಿ, ಉಡುಪಿ ಜಿಲ್ಲಾ ಪದವಿಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಶ್ರೀ ಜೀವನ್ ಕುಮಾರ್ ಶೆಟ್ಟಿ, ಜನತಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಮಂಜು ಕಾಳಾವರ,ಕುಂದಾಪುರ ತಾಲೂಕು ಕ್ರೀಡಾ ಸಂಯೋಜಕರಾದ ಶ್ರೀ ರಾಮ ಶೆಟ್ಟಿ, ಎಸ್.ವಿ. ಪದವಿಪೂರ್ವ ಕಾಲೇಜು ಗಂಗೊಳ್ಳಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಶ್ರೀ ನಾಗರಾಜ್, ಕೋಟ ವಿವೇಕ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ವಸಂತ ಶೆಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕರಾದ ದಿನೇಶ್ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ಡಾ| ಮಂಜುನಾಥ ಗಾಣಿಗ, ಕಾರ್ಯದರ್ಶಿಗಳಾದಶ್ರೀ ಸುನಿಲ್ ಚಿತ್ತಾಲ್, ಕೋಶಾಧಿಕಾರಿಗಳಾಗಿರುವ ಶ್ರೀ ಕಾರ್ತಿಕೇಯ ಎಮ್.ಎಸ್,ಆಡಳಿತಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದಶ್ರೀ ಪ್ರದೀಪ್ ಕುಮಾರ್ ಶೆಟ್ಟಿ, ಬೋಧಕ/ ಬೋಧಕೇತರ ವ್ರಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲರಾದ ಗಣೇಶ ಮೊಗವೀರರವರು ಸ್ವಾಗತಿಸಿ, ಆಂಗ್ಲಭಾ ಉಪನ್ಯಾಸಕಿ ಪ್ರಿಯಾಂಕ ವಂದಿಸಿದರು.ಕನ್ನಡ ಉಪನ್ಯಾಸಕ ಉದಯ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.