ಹೆಮ್ಮಾಡಿ(ಸೆ,23): ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹಮ್ಮಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಬಾಲಕರ ವಿಭಾಗದಲ್ಲಿ ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ.ಮತ್ತು ಸಾತ್ವಿಕ್ ಪೂಜಾರಿ ದ್ವಿತೀಯ ಪಿ.ಯು.ಸಿ ಹಾಗೂ ಬಾಲಕಿಯರ ವಿಭಾಗದಲ್ಲಿ ಅಮಿಷಾ ಚೌದ್ರಿ ಪ್ರಥಮ ಪಿ.ಯು.ಸಿ ಮತ್ತು ಉನ್ನತಿ ಶೆಟ್ಟಿ ದ್ವಿತೀಯ ಪಿ.ಯು.ಸಿ.ಆಯ್ಕೆಯಾಗಿರುತ್ತಾರೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.