ಹೆಮ್ಮಾಡಿ(ಸೆ.23): ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಹಾಗೂ ಬ್ರಾಹ್ಮಿ ಶ್ರೀ ದುರ್ಗಾಪರಮೇಶ್ವರಿ ಪ್ರೌಢಶಾಲೆ ಕಮಲಶಿಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾದ ವರ್ಷಾ ರವಿಶಂಕರ್ ಪ್ರಥಮ ಪಿ.ಯು.ಸಿ.ಕನ್ನಡ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಅಲಕಾ ಹೆಬ್ಬಾರ್ ಪ್ರಥಮ ಪಿ.ಯು.ಸಿ. ಭರತನಾಟ್ಯ ವಿಭಾಗದಲ್ಲಿ ಪ್ರಥಮ ಸ್ಥಾನ, ಪ್ರಜ್ವಲ್ ಪೂಜಾರಿ ಪ್ರಥಮ ಪಿ.ಯು.ಸಿ. ಜಾನಪದಗೀತೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಹಾಗೆಯೇ ವೈಷ್ಣವಿ ಪ್ರಥಮ ಪಿ.ಯು.ಸಿ ರಂಗೋಲಿ ವಿಭಾಗದಲ್ಲಿ ದ್ವಿತೀಯ ಸ್ಥಾನ, ಹಾಗೂ ಶೈಮಾ ದ್ವಿತೀಯ ಪಿ.ಯು.ಸಿ ಗಝಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.