ಹೆಮ್ಮಾಡಿ(ಸೆ,23): ಕುಂದಾಪುರ ತಾಲ್ಲೂಕಿನ ಪ್ರಮುಖ ದೇವಾಲಯಗಳಲ್ಲಿ ಒಂದಾದ ಬಗ್ವಾಡಿಯಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸೆ.26 ರಿಂದ ಆ .05 ರ ತನಕ ಶರನ್ನವರಾತ್ರಿ ಮಹೋತ್ಸವ ನಡೆಯಲಿದೆ.
ಪ್ರತಿ ದಿನ ಚಂಡಿಕಾ ಪಾರಾಯಣ, ಕಲ್ಪೋಕ್ತ ಪೂಜೆ, ಚಂಡಿಕಾ ಹೋಮ ನಡೆಯಲಿದೆ. ಅ.04 ರ ಸಂಜೆ 6 ಗಂಟೆಗೆ ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಚಕ್ರ ಚಂಡಿಕಾ ಯಕ್ಷಗಾನ ಬಯಲಾಟ ನಡೆಯಲಿದ್ದು, ಅ. 05 ರ ವಿಜಯ ದಶಮಿಯ ದಿನದಂದು ನವ ಚಂಡಿಕಾಯಾಗ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ಜರುಗಲಿರುವುದು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕ್ರಪೆಗೆ ಪಾತ್ರರಾಗಬೇಕೆಂದು ದೇವಾಲಯದ ಅಡಳಿತ ಮಂಡಳಿ ತಿಳಿಸಿದೆ.