ಉಡುಪಿ (ಸೆ,24): ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ನಡೆಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಕುಮಾರಿ ಲೇಖನಾ ಬಾಲಕಿಯರ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ 18 ರ ವಯೋಮಿತಿಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಮುಂದಿನ ರಾಜ್ಯಮಟ್ಟದ ತಂಡದಲ್ಲಿ ಆಡುವ ಅವಕಾಶ ಗಳಿಸಿದ್ದಾರೆ.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾತ್ರವಲ್ಲದೆ ಕ್ರೀಡಾ ಚಟುವಟಿಕೆಗಳಿಗೂ ಉತ್ತೇಜನ ನೀಡಲಾಗುತ್ತಿದೆ. ಕ್ರಿಯೇಟಿವ್ ಈ ಹಿಂದೆಯೂ ಪಠ್ಯೇತರ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ಅನೇಕ ಪ್ರಶಸ್ತಿಗಳನ್ನು ಪಡೆದು ಪ್ರಶಂಸೆಗೆ ಪಾತ್ರವಾಗಿದೆ.ವಿದ್ಯಾರ್ಥಿಗಳ ಸಾಧನೆಯನು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ತಂಡದ ಸಂಯೋಜಕ ಮಹೇಶ್ ಶೆಣೈ, ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್, ಉಪನ್ಯಾಸಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.