ಕುಂದಾಪುರ (ಸೆ.29):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿಗಳಿಗೆ ನೂತನ ಶಿಕ್ಷಣ ನೀತಿಯ ಪಠ್ಯಕ್ರಮದ ಬಗ್ಗೆ ಮಾಹಿತಿ ಒದಗಿಸುವ ದೃಷ್ಠಿಯಿಂದ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮ ಸೆ.28 ರಂದು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಶಿಸ್ತು ಮತ್ತು ಶ್ರಮದ ಅಗತ್ಯತೆಗಳ ಕುರಿತು ತಿಳಿಸಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಮಾತನಾಡಿ ಕಾಲೇಜಿನ ಬಹುಬಗೆಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಅವಶ್ಯಕತೆ ಹಾಗೂ ವಿಭಾಗ ಕಲ್ಪಿಸಿಕೊಡುವ ಅವಕಾಶಗಳ ಕುರಿತು ಮನವರಿಕೆ ಮಾಡಿದರು.ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ವೀಣಾ ಭಟ್ ಸ್ವಾಗತಿಸಿ, ವಿಭಾಗದ ಕಾರ್ಯ ಯೋಜನೆಗಳ ಪರಿಚಯ ನೀಡಿದರು.ಉಪನ್ಯಾಸಕಿ ದೀಪಾ ಪೂಜಾರಿ ಕಾಲೇಜು ಹಾಗೂ ವಿಶ್ವವಿದ್ಯಾನಿಲಯದ ಪರೀಕ್ಷಾ ಕ್ರಮದ ಪರಿಚಯ ನೀಡಿದರು. ಉಪನ್ಯಾಸಕಿ ಅರ್ಪಣಾ ಶೆಟ್ಟಿ ವಾಣಿಜ್ಯ ವಿಷಯಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ಒದಗಿಸಿದರು.
ಉಪನ್ಯಾಸಕರಾದ ಸುಶ್ಮೀತಾ ಸಾಲಿಗ್ರಾಮ ವಂದಿಸಿದರು, ವಿನಯ ಶೆಟ್ಟಿ ನಿರೂಪಿಸಿದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಪ್ರಥಮ ವರ್ಷದ ಪದವಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸುವ ಮೂಲಕ ವಿಶೇಷ ಗಮನ ಸೆಳೆದರು.