ಗಂಗೊಳ್ಳಿ (ಸೆ.01): ಎನ್ಎಸ್ಎಸ್ ಮೂಲಕ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ವಿದ್ಯಾರ್ಥಿಗಳು ಬಳಸಿಕೊಂಡರೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ. ವ್ಯಕ್ತಿತ್ವ ವಿಕಸನದ ಜೊತೆಗೆ ಉತ್ತಮ ಸಮಾಜವನ್ನು ಕಟ್ಟುವಲ್ಲಿಯೂ ಎನ್ಎಸ್ಎಸ್ ಕೊಡುಗೆಯನ್ನು ನೀಡುತ್ತದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಅಧ್ಯಕ್ಷರಾದ ಶ್ರೀ ಎಚ್ ಗಣೇಶ್ ಕಾಮತ್ ಅವರು ಅಭಿಪ್ರಾಯ ಪಟ್ಟರು.
ಅವರು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು, ಗಂಗೊಳ್ಳಿಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸರಸ್ವತಿ ವಿದ್ಯಾಲಯ ಅಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಎಸ್ ವಿಎಸ್ ಅಸೋಸಿಯೇಷನ್ ಅಧ್ಯಕ್ಷರಾದ ಡಾ. ಕಾಶಿನಾಥ್ ಪೈ , ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀನಿವಾಸ ಖಾರ್ವಿ, ಶ್ರೀ ಮೂಕಾಂಬಿಕಾ ಇಂಡಸ್ಟ್ರೀಸ್ ಗುಜ್ಜಾಡಿಯ ಮಾಲೀಕರಾದ ಉಮೇಶ್ ಮೇಸ್ತ,, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಮೊದಲಾದವರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಸುಗುಣ ಆರ್ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮವನ್ನು ನಿರ್ವಹಿಸಿದರು. ಸಿಂಚನ ಎನ್ಎಸ್ಎಸ್ ಪ್ರತಿಜ್ಞೆ ಬೋಧಿಸಿದರು. ಶಿಬಿರಾರ್ಥಿ ಮಹಿಮಾ ವಂದಿಸಿದರು.