ಶಿವಮೊಗ್ಗ (ಸೆ,2022): ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ (ರಿ), ಶಿವಮೊಗ್ಗ ಇವರ ಪ್ರಯೋಜಕತ್ವದಲ್ಲಿ ಶಿವಮೊಗ್ಗ ಮಕ್ಕಳ ದಸರಾ 2022 ರ ಅಂಗವಾಗಿ ಸೆಪ್ಪಂಬರ್ 27 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 2 ನೇ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಂದಾಪುರದ ಎಕ್ಸಲೆಂಟ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿದ್ದಾರೆ.
ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿಘ್ನೇಶ್ ನಾಯಕ್ 45 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಿಜ್ಞಾನ ವಿಭಾಗದ ಮೊಹಮ್ಮದ್ ಅನೀಸ್ 55 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನ, ದ್ವಿತೀಯ ವಾಣಿಜ್ಯ ವಿಭಾಗದ ಸುಜನ್ ಶೆಟ್ಟಿ 50 ಕೆಜಿ ಪುರುಷರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ಆಯುಷ್ ಪುತ್ರನ್ 60 ಕೆಜಿ ಪುರುಷರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ, ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ವೃಂದದವರು ಮತ್ತು ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.