ತಲ್ಲೂರು(ಆ.05): ಸಮಾಜ ಸೇವಕ, ಶಿಕ್ಷಣ ಪ್ರೇಮಿ, ಧಾರ್ಮಿಕ, ಸಾಮಾಜಿಕ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿರುವ ನಾಡೋಜ ಡಾ. ಜಿ.ಶಂಕರ್ ರವರ 67 ನೇ ಹುಟ್ಟು ಹಬ್ಬವನ್ನು ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ತಲ್ಲೂರಿನ ವಿಶೇಷ ಚೇತನ ಮಕ್ಕಳ ಶಾಲೆಯಲ್ಲಿ ಅ .05 ರಂದು ಆಚರಿಸಲಾಯಿತು.
ಕೇಕ್ ಕತ್ತರಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚುವುದರ ಜೊತೆಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸುವುದರ ಜೊತೆಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಯಿತು.
ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಅಧ್ಯಕ್ಷ ಲೋಹಿತ್ ಕುಂದರ್ ಬಾಳಿಕೆರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಮೊಗವೀರ ಮಹಾಜನ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಅಧ್ಯಕ್ಷರಾದ ಉದಯ ಕುಮಾರ ಹಟ್ಟಿಯಂಗಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮೊಗವೀರ ಮಹಾಜನ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆ ಕಾರ್ಯದರ್ಶಿ ಪ್ರಭಾಕರ ಸೇನಾಪುರ, ಉಪಾಧ್ಯಕ್ಷ ರಾಜು ಶ್ರೀಯಾನ್ ಗುಜ್ಜಾಡಿ,ನಾರಾಯಣ ವಿಶೇಷ ಚೇತನ ಶಾಲೆಯ ಅಧ್ಯಕ್ಷರಾದ ಸುರೇಶ್ ತಲ್ಲೂರು ,ಮಹಿಷಾಸುರ ಮರ್ದಿನಿ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಸುಮತಿ ಬಿ. ಮೊಗವೀರ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ನಿರ್ದೆಶಕರ ಬೇಬಿ ಜಿ. ನಾಯ್ಕ್ ನಂದಿಕೇಶ್ವರ ದೇವಸ್ಥಾನ ಹಾಡಿಗರಡಿ ಇದರ ಆಡಳಿತ ಮಂಡಳಿಯ ಅಧ್ಯಕ್ಷರಾದ ನಾಗೇಶ್ ಕಾಂಚನ್ ,ಮೊಗವೀರ ಯುವ ಘಟನೆಯ ಹೆಮ್ಮಾಡಿ ಘಟಕದ ಕಾರ್ಯದರ್ಶಿ ಪ್ರವೀಣ್ ಮೊಗವೀರ ಗಂಗೊಳ್ಳಿ ಹಾಗೂ ಸದಸ್ಯರು ಮತ್ತು ಮೊಗವೀರ ಮಹಾಜನ ಸಂಘ (ರಿ.), ಬಗ್ವಾಡಿ ಹೋಬಳಿ ಕುಂದಾಪುರ ಶಾಖೆಯ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.