ಕುಂದಾಪುರ (ಅ.05) : ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕ ಹಾಗೂ ಸ್ವರಾಜ್ಯ 75 ಸಂಘಟನೆಯ ಸಹಭಾಗಿತ್ವದಲ್ಲಿ ಸ್ವಾತಂತ್ರ್ಯಹೋರಾಟಗಾರ ತಲ್ಲೂರು ಎಸ್.ಎನ್. ಸುಬ್ಬಣ್ಣ ಗುಪ್ತ ಅವರ ಮನೆಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮ ಅ.02 ರಂದು ನಡೆಯಿತು. ರಾಷ್ಟ್ರ ಧ್ವಜಕ್ಕೆ ಪುಪ್ಪಾರ್ಚನೆಯ ಮೂಲಕ ತಲ್ಲೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭೀಮವ್ವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ವಿಶ್ವದಾಖಲೆಯ ಯೋಗಪಟು ತಲ್ಲೂರು ನಿರಂಜನ ಶೆಟ್ಟಿ ನಾಮಫಲಕ ಅನಾವರಣಗೊಳಿಸಿದರು. ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ “ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರ ಕೊಡುಗೆ” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ತಲ್ಲೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀ. ಗಿರೀಶ್ ಎಸ್. ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಚೇತನ್ ಶೆಟ್ಟಿ ಕೊವಾಡಿ, ಕುಂದಾಪುರ ತಾಲೂಕು ಸಾಹಿತ್ಯ ಪರಿಷತ್ ಘಟಕದ ಕಾರ್ಯದರ್ಶಿ ದಿನಕರ್ ಆರ್. ಶೆಟ್ಟಿ ಬಸ್ರೂರು, ಶ್ರೀಮತಿ ಅಕ್ಷತಾ ಗಿರೀಶ್ ಐತಾಳ್ ಹಸ್ತ ಚಿತ್ತ ಫೌಂಡೇಶನ್(ರಿ.), ವಕ್ವಾಡಿ, ಶ್ರೀ ಅರುಣ್ ಕುಮಾರ್ ಶೆಟ್ಟಿ, ಎನ್.ಎಸ್.ಎಸ್. ಸಹಯೋಜನಾಧಿಕಾರಿ ದೀಪಾ ಪೂಜಾರಿ ಆಲೂರು , ಶ್ರೀ ಅರುಣ್ ಕುಮಾರ್ ಹೆಚ್. ಆರ್., ಡಾ| ರಮೇಶ್ ಆಚಾರ್ಯ, ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
‘ಸ್ವರಾಜ್ಯ 75’ ಕಾರ್ಯಕ್ರಮ ಸಂಚಾಲಕ ಶ್ರೀ. ಪ್ರದೀಪ್ ಕುಮಾರ್ ಬಸ್ರೂರು ಪ್ರಾಸ್ತಾವಿಸಿದರು. ಶ್ರೀ ಪ್ರಮೋದ್ ಶಂಕರನಾರಾಯಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.