ಕಾರ್ಕಳ(ಅ.07): ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ದೇಶದ ದ್ವಿತೀಯ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಅ.02 ರಂದು ಆಚರಿಸಲಾಯಿತು.
ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಮಾತನಾಡಿ ಇಂದು ಗಾಂಧೀಜಿಯವರ ಸಾಮರಸ್ಯ ಚಿಂತನೆ ಜೀವನದ ಆದರ್ಶ ನಮಗೆ ದಾರಿದೀಪವಾಗಬೇಕಿದೆ ಮತ್ತು ದೇಶ ಕಂಡ ಅಪ್ರತಿಮ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ “ಜೈ ಜವಾನ್ ಜೈ ಕಿಸಾನ್” ಘೋಷಣೆ ಹಾಗೂ ಪ್ರಬುದ್ಧತೆಯನ್ನು ಯುವಜನತೆ ಅರಿತು ಅವರ ಆದರ್ಶ ಮಾರ್ಗದಲ್ಲಿ ಸಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗಾಂಧೀ ಮತ್ತು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಅಶ್ವಥ್ ಎಸ್ ಎಲ್, ಅಮೃತ್ ರೈ, ಆದರ್ಶ ಎಂ ಕೆ, ಗಣಪತಿ ಭಟ್ ಕೆ ಎಸ್, ಉಪನ್ಯಾಸಕರಾದ ರಾಜೇಶ್ ಶೆಟ್ಟಿ, ಕ್ಯಾಂಪಸ್ ಮೇಲ್ವಿಚಾರಕ ಸುನಿಲ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಪ್ರಕಾಶ್, ರುವಿಟಾ ಡಿಸೋಜ, ನಿಲಯ ಪಾಲಕರು ಉಪಸ್ಥಿತರಿದ್ದರು.