ಕುಂದಾಪುರ(ಅ,8): ಹಲವಾರು ರಾಜ್ಯ ಮತ್ತು ಅಂತರ್ ರಾಜ್ಯ ಮಟ್ಟದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿಯನ್ನು ಪಡೆದಿರುವ ಕುಂದಾಪುರ ತಾಲೂಕಿನ ಕಂಚುಗೋಡು ನಿವಾಸಿ ಸೋಮಶೇಖರ್ ಖಾರ್ವಿಯವರು ಇತ್ತೀಚೆಗೆ ಮೈಸೂರಿನಲ್ಲಿ ದಸರಾ ಪ್ರಯುಕ್ತ ನಡೆದ ಬಾಡಿ ಬಿಲ್ಡಿಂಗ್ 65 ಕೆ.ಜಿ ವಿಭಾಗದಲ್ಲಿ ದ್ವೀತಿಯ ಸ್ಥಾನ ಪಡೆದಿರುತ್ತಾರೆ.
ಸೋಮ ಶೇಖರ್ ಖಾರ್ವಿಯವರ ಈ ಸಾಧನೆಗೆ ಗ್ರಾಮಸ್ಥರು ಮತ್ತು ಅಭಿಮಾನಿಗಳು ಅಭಿನಂದನೆಕೋರಿದ್ದಾರೆ.