ಹೆಮ್ಮಾಡಿ(ಅ,8): ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ಗಣೇಶ ಮೊಗವೀರರವರನ್ನು ಶ್ರೀ ವಿ.ವಿ.ವಿ ಮಂಡಳಿ(ರಿ.),ಗೆ ಪದನಿಮಿತ್ತ ನಾಮ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಶ್ರೀ ವಿ.ವಿ.ವಿ.ಮಂಡಳಿ(ರಿ) ಗೆ ಹೆಮ್ಮಾಡಿ ಇದರ ಸಾಮಾನ್ಯ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.
ಶ್ರೀ ಗಣೇಶ ಮೊಗವೀರರವರು ಸಮರ್ಪಣಾ ಎಜುಕೇಶನ್ ಟ್ರಸ್ಟ್(ರಿ) ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.