ಬೈಂದೂರು(ಅ,15): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಬೈಂದೂರು – ಶಿರೂರು ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಇವರ ವತಿಯಿಂದ ನಾಡೋಜ ಡಾ. ಜಿ . ಶಂಕರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಅಕ್ಟೋಬರ್ .16 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ 2 ರವರೆಗೆ ಬೈಂದೂರಿನ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಅಂಬೇಡ್ಕರ್ ಭವನದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ವೈದ್ಯಾಧಿಕಾರಿಗಳಿಂದ ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ಉಚಿತ ಕನ್ನಡಕ ವಿತರಣೆ ನಡೆಯಲಿದೆ.
ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಬೈಂದೂರು – ಶಿರೂರು ಘಟಕದ ತಿಳಿಸಿದೆ .