ಕುಂದಾಪುರ (ಅ,17):ಕಾಲೇಜಿಗೆ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ನೂತನವಾಗಿ ಸೇರ್ಪಡೆಯಾದ ಪ್ರಥಮ ವರ್ಷದ ಬಿಸಿಎ ಹಾಗೂ ಬಿಎಸ್ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಅವಕಾಶಗಳ ಜೊತೆಗೆ ಭವಿಷ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕಾಲೇಜಿನ ಗಣಕ ವಿಜ್ಞಾನ ಹಾಗೂ ವಿಜ್ಞಾನ ವಿಭಾಗದ ವತಿಯಿಂದ ಪೂರ್ವಪರಿಚಯ ಕಾರ್ಯಕ್ರಮವನ್ನು ಅ .15 ರಂದು ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ .ಉಮೇಶ್ ಶೆಟ್ಟಿ ಯವರು ಮಾತನಾಡಿ ವಿದ್ಯಾರ್ಥಿಗಳಿಗೆ ಮಾಹಿತಿ ತಂತ್ರಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ವಿಪುಲವಾದ ಅವಕಾಶಗಳಿದ್ದು ,ಅದಕ್ಕೆ ಪೂರಕವಾದ ಸೌಲಭ್ಯ ಗಳನ್ನು ಕಾಲೇಜಿನಲ್ಲಿ ಒದಗಿಸಲಾಗಿದೆ ಎಂದು ಹೇಳಿದರು .
ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ವಿಭಾಗದ ಕಾರ್ಯ ಯೋಜನೆಗಳ ಪರಿಚಯ ನೀಡಿದರು. . ಉಪನ್ಯಾಸಕರದ ನಿರುಷಾ ಶೆಟ್ಟಿ ಸ್ವಾಗತಿಸಿ, ರಕ್ಷಿತಾ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು . ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಿದರು.
\