ಹೆಮ್ಮಾಡಿ(ಅ,27): ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ ಇದರ ಹೆಮ್ಮಾಡಿ ಘಟಕದ ಆಶ್ರಯದಲ್ಲಿ ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ), ಅಂಬಲಪಾಡಿ ಉಡುಪಿ ,ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಹಾಗೂ ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇವರ ಸಹಯೋಗದೊಂದಿಗೆ ನವೆಂಬರ್ 06 ರ ಆದಿತ್ಯವಾರ ಬೆಳಿಗ್ಗೆ ಗಂಟೆ 8 ರಿಂದ ಮಧ್ಯಾಹ್ನ 2 ರವರೆಗೆ ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘ ನಿ, ಹೆಮ್ಮಾಡಿ ಇದರ “ಮತ್ಸ ಜ್ಯೋತಿ” ಸಭಾಂಗಣದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇಲ್ಲಿನ ವೈದ್ಯಾಧಿಕಾರಿಗಳಿಂದ ಸಾರ್ವಜನಿಕ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರ ನಡೆಯಲಿದೆ ಎಂದು ಪ್ರಕಟನೆಯೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು ಈ ಉಚಿತ ನೇತ್ರ ತಪಾಸಣೆ ಹಾಗೂ ಉಚಿತ ಕನ್ನಡಕ ವಿತರಣೆ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಮೊಗವೀರ ಯುವ ಸಂಘಟನೆ (ರಿ.), ಉಡುಪಿ ಜಿಲ್ಲೆ, ಹೆಮ್ಮಾಡಿ ಘಟಕದ ಅಧ್ಯಕ್ಷರಾದ ಲೋಹಿತಾಶ್ವ ಆರ್ .ಕುಂದರ್ ಬಾಳಿಕೆರೆ ತಿಳಿಸಿದ್ದಾರೆ .