ಉಡುಪಿ(ಅ,28): ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕಾಲೇಜಿನ ನೂತನ ರವೀಂದ್ರ ಮಂಟಪದ ಬಳಿ ಬೆಳಿಗ್ಗೆ 11 ಗಂಟೆಗೆ ಜರುಗಿತು. ಕಾಲೇಜಿನ ಪ್ರಾಂಶುಪಾಲ ಪ್ರೊ. ಲಕ್ಷ್ಮೀನಾರಾಯಣ ಕಾರಂತ ಕಾರ್ಯಕ್ರಮದ ಬಗ್ಗೆ ವಿವರಣೆ ನೀಡಿ ಕೋಟಿ ಕಂಠ ಗಾಯನಕ್ಕೆ ಚಾಲನೆ ನೀಡಿದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲೆ ಮಾಲತಿದೇವಿ ಎ. ಶುಭಹಾರೈಸಿದರು.
ಸಂಸ್ಕೃತ ವಿಭಾಗದ ಮುಖ್ಯಸ್ಥೆ ಡಾ| ವಸುಮತಿ ಭಟ್ ನೇತೃತ್ವದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಕನ್ನಡದ ಆರು ಗೀತೆಗಳನ್ನು ಸುಶ್ರಾವ್ಯವಾಗಿ ಹಾಡಿದರು. ಕಾಲೇಜಿನ ಎಲ್ಲಾ ವಿಭಾಗದ ಬೋಧಕ, ಬೋಧಕೇತರ ಹಾಗೂ 1500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೋಟಿ ಕಂಠ ಗಾಯನದಲ್ಲಿ ಪಾಲ್ಗೊಂಡು ದನಿಗೂಡಿಸಿದರು. ಕಾರ್ಯಕ್ರಮದ ಸಂಚಾಲಕಿ, ಗಣಕ ವಿಜ್ಞಾನ ವಿಭಾಗದ ಪ್ರವೀಣ ಕುಮಾರಿ ಎಂ. ಕೆ. ಸಂಕಲ್ಪ ವಿಧಿ ಬೋಧಿಸಿದರು.ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ಪೂರ್ಣಿಮಾ ಶೆಟ್ಟಿ ನಿರೂಪಿಸಿದರು.