ಕುಂದಾಪುರ (ಅ,28):ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಸ್ಕ್ರತಿ ಇಲಾಖೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28 ರಂದು ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ‘ ಕೋಟಿ ಕಂಠ ಗಾಯನ ‘ ಕಾರ್ಯಕ್ರಮದಲ್ಲಿ ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡು ಕನ್ನಡ ನಾಡು- ನುಡಿಯ ಹಿರಿಮೆಗೆ ಸಂಬಂಧಿಸಿದ ಹಾಡುಗಳನ್ನು ಹಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಶ್ರೀ ನವೀನ್ ಕುಮಾರ ಶೆಟ್ಟಿಯವರು ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.