ಕುಂದಾಪುರ( ಅ,28): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ನಡೆದ ‘ಕೋಟಿ ಕಂಠ ಗಾಯನ’ದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶ್ರೀ ರಕ್ಷಿತ್ ರಾವ್, ಕಾರ್ಯಕ್ರಮ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀ ಸುಕುಮಾರ್ ಶೆಟ್ಟಿ ಕಮಲಶಿಲೆ ಹಾಗೂ ಎಲ್ಲಾ ಪ್ರಾಧ್ಯಾಪಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕನ್ನಡ ಪ್ರತಿಜ್ಞಾ ವಿಧಿ ಸ್ವೀಕರಿಸಿ, ಕನ್ನಡ ಮಾತೆಗೆ ಹಚ್ಚೇವು ಕನ್ನಡದ ದೀಪ, ವಿಶ್ವವಿನೂತನ, ನಾಡಗೀತೆಯನ್ನು ಹಾಡುವ ಮೂಲಕ ನಾಡಪ್ರೇಮ ಮೆರೆದರು.
ಕಾರ್ಯಕ್ರಮದಲ್ಲಿ ಅಂತರ್ ತರಗತಿ ‘ಕನ್ನಡ ಗೀತ ಗಾಯನ’ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ವಿದ್ಯಾರ್ಥಿನಿ ಸ್ವಾತಿ ನಿರೂಪಿಸಿದರು.