ಗಂಗೊಳ್ಳಿ( ಅ,31): ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಪೋಷಿಸುವಲ್ಲಿ ಪ್ರತಿಯೊಬ್ಬರು ಮನಸ್ಸು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ತಮ್ಮನ್ನು ಹೆಚ್ಚು ಮುತುವರ್ಜಿಯಿಂದ ತೊಡಗಿಸಿಕೊಳ್ಳಬೇಕಿದೆ ಎಂದು ಲಿಫ್ಟ್ ನ್ ಒಲಿವೆರಾ ಅಭಿಪ್ರಾಯಪಟ್ಟರು.
ಅವರು ಗಂಗೊಳ್ಳಿಯ ಗುಜ್ಜಾಡಿ ಗೋಪಾಲ್ ನಾಯಕ್ ರೋಟರಿ ಸಭಾಂಗಣದಲ್ಲಿ ಎಸ್ಎಂಎಲ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲ್ಪಟ್ಟ ಉಡುಪಿ ಜಿಲ್ಲಾ ಮಟ್ಟದ ಪುರುಷರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಗಂಗೊಳ್ಳಿಯ ರೋಟರಿ ಕ್ಲಬ್ ಅಧ್ಯಕ್ಷೆ ಸುಗುಣ ಆರ್ ಕೆ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಕೆ ನಾರಾಯಣಶೆಟ್ಟಿ, ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ದೈಹಿಕ ಶಿಕ್ಷಕ ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿ ಮತ್ತು ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯ ಉಪ ಪ್ರಾಂಶುಪಾಲ ಉಮೇಶ್ ಕರ್ಣಿಕ್ ಇವರನ್ನು ಸನ್ಮಾನಿಸಲಾಯಿತು. ಎಸ್ಎಂಎಲ್ ಫ್ರೆಂಡ್ಸ್, ಪ್ರತಿನಿಧಿಗಳಾದ ಮನೋಜ್, ಹೃತಿಕ್, ಗಣೇಶ್, ಕೌಶಿಕ್ ಉಪಸ್ಥಿತರಿದ್ದರು.
ಶ್ರೇಯ ಖಾರ್ವಿ ಪ್ರಾರ್ಥಿಸಿದರು. ನಾಗರಾಜ್ ನಾಯಕ್ ಸ್ವಾಗತಿಸಿದರು. ಚೇತನ್ ಖಾರ್ವಿ ಪ್ರಾಸ್ತಾವಿಕ ಮಾತುಗಳಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ತಿಕ್ ವಂದಿಸಿದರು.