ಕುಂದಾಪುರ (ಅ,31 ): ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ನಡೆದ ಫಿಟ್ ಇಂಡಿಯಾ ಫ್ರೀಡಮ್ ರನ್ 3.0 ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೆ. ಉಮೇಶ್ ಶೆಟ್ಟಿ ಚಾಲನೆ ನೀಡಿದರು.
ಎನ್.ಎಸ್.ಎಸ್. ಸ್ವಯಂ ಸೇವಕರು ಕಾಲೇಜಿನ ಕ್ಯಾಂಪಸ್ನಿoದ ನಗರದ ರಾಷ್ಟ್ರೀಯ ಹೆದ್ದಾರಿ ಸಂಗಮ್ವರೆಗೆ ಜಾಥಾದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಕಾಲೇಜಿನ ಎನ್.ಎಸ್.ಎಸ್. ಯೋಜನಾಧಿಕಾರಿ ಹಾಗೂ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಯೋಜನಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮೆಂಡ್ ನಜರತ್ ಉಪಸ್ಥಿತರಿದ್ದರು.