ಕುಂದಾಪುರ(ಅ,31) : ಸ್ವತಂತ್ರ ಭಾರತವನ್ನು ಒಗ್ಗೂಡಿಸಿದ ದೇಶದ ಉಕ್ಕಿನ ಮನುಷ್ಯ ಹಾಗೂ ದೇಶದ ಮೊದಲ ಗೃಹ ಮಂತ್ರಿ ಸರ್ದಾರ ವಲ್ಲಭಬಾಯಿ ಪಟೇಲರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಏಕತಾ ದಿವಸ ಎಂದು ಆಚರಿಸಲಾಗುತ್ತಿದೆ. ಆ ಹಿನ್ನಲೆಯಲ್ಲಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಸರ್ದಾರ ವಲ್ಲಭಬಾಯಿ ಪಟೇಲ್ರವರ ಕೊಡುಗೆಯನ್ನು ಸ್ಮರಿಸುತ್ತಾ ಏಕತಾ ದಿವಸವನ್ನು ಆಚರಿಸಲಾಯಿತು.
ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ಪ್ರವೀಣ ಮೊಗವೀರ ಗಂಗೊಳ್ಳಿ ಏಕತಾ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಯೋಜನಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಸಹ ಯೋಜನಾಧಿಕಾರಿ ದೀಪಾ ಪೂಜಾರಿ, ಎನ್.ಎಸ್.ಎಸ್. ಸ್ವಯಂ ಸೇವಕರು ಉಪಸ್ಥಿತರಿದ್ದರು.