ಕುಂದಾಪುರ (ನ,4): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಜಯಶ್ರೀ ತಂತ್ರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ನೇತೃತ್ವದಲ್ಲಿ ಅ,31 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿಯ ಜಾನಪದ ಗೀತೆ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸoಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ರವರ ಮಾರ್ಗದರ್ಶನ ಹಾಗೂ ಸಂಗೀತ ಶಿಕ್ಷಕ ಪ್ರಕಾಶ್ರವರಿಂದ ತರಬೇತಿ ಪಡೆದು ಸ್ಪರ್ಧಿಸಿ ವಿಜೇತರಾದ ವಿದ್ಯಾರ್ಥಿನಿಯನ್ನು ಉಪಪ್ರಾಂಶುಪಾಲೆ ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಲತಾ ಜಿ. ಭಟ್ ಅಭಿನಂದಿಸಿದರು.