ಕುಂದಾಪುರ( ನ,8) : ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಐಎಎಸ್ & ಕೆಎ ಎಸ್ ಮತ್ತು ಇತರೆ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಯುನಿವರ್ಸಲ್ ಕೋಚಿಂಗ್ ಸೆಂಟರ್ನ ತರಬೇತುದಾರರಾದ ಶ್ರೀ ಅಖಿಲೇಶ್ ಶೆಟ್ಟಿ ಮಾತನಾಡಿ, ಸರ್ಕಾರಿ ಉದ್ಯೋಗಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ತರಬೇತುದಾರರಾದ ಶ್ರೀ ಬಂಗಾರಪ್ಪ, ಉದ್ಯೋಗ ಮಾಹಿತಿ ಮತ್ತು ತರಬೇತಿ ವಿಭಾಗದ ಸಂಯೋಜಕರಾದ ಶ್ರೀ ಮಹೇಶ್ ಕುಮಾರ್ ಮತ್ತು ಶ್ರೀ ರಜತ್ ಬಂಗೇರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.