ಕುಂದಾಪುರ( ನ,10): ಇಲ್ಲಿನ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರ ನವೆಂಬರ್ 8 ರಂದು ನಡೆಯಿತು.
ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಹಾಗೂ ಉಪನ್ಯಾಸಕರಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ಸತೀಶ ಆರ್ ಮೈಸೂರು ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಇಂದಿನ ಯುವಕರೇ ನಾಳೆಯ ನೇತಾರರು”, ನೀವು ಈ ದೇಶವನ್ನು ಮುನ್ನೆಡೆಸಿ ರಕ್ಷಿಸುವವರು ಎಂದು ಹೇಳುತ್ತಾ, ಯಶಸ್ಸಿನ ರಹಸ್ಯವಿರುವುದು ಏಕಾಗ್ರತೆಯಲ್ಲಿ ಎಂಬ ಸತ್ಯವನ್ನು ವಿದ್ಯಾರ್ಥಿಗಳು ಅರಿಯಬೇಕೆಂದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಪೂರ್ವ ಜ್ಞಾನವನ್ನು ಪಡೆಯಬಲ್ಲ ಅಪಾರ ಶಕ್ತಿ ಅಡಗಿದೆ ಎನ್ನುವುದರಲ್ಲಿ ಸಂಶಯವಿಲ್ಲ. ಶಿಸ್ತುಬದ್ಧ ಯೋಗಾಸನಗಳು ನರಮಂಡಲವನ್ನು ಬಲಗೊಳಿಸುವುದಲ್ಲದೆ ಚುರುಕಾಗಿಸುವುದರಿಂದ ಏಕಾಗ್ರತೆಗೆ ಬಹಳ ಸಹಕಾರಿಯಾಗುತ್ತದೆ.ಹಾಗೂ ನಮ್ಮ ಜೀವನದಲ್ಲಿ ಯಾವುದೇ ಕೆಲಸ ಮಾಡಿದರೂ ವ್ಯವಸ್ಥಿತವಾಗಿ ಮಾಡಬೇಕೆಂದರು.
ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷರು ಹಾಗೂ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ರಮೇಶ್ ಶೆಟ್ಟಿ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನದೊಂದಿಗೆ ಮಾನಸಿಕವಾಗಿ ಕಲಿಕೆಯಲ್ಲಿ ಸಧೃಢರಾಗಬೇಕು ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಇಂತಹ ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯಲ್ಲಿ ಆಗಾಗ ನಡೆಸುವುದಾಗಿ ಹೇಳಿದರು.
ವೇದಿಕೆಯಲ್ಲಿ ಎಕ್ಸಲೆಂಟ್ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸುರೇಖಾ ಆಚಾರ್ಯರವರು ಉಪಸ್ಥಿತರಿದ್ದರು. ಆಂಗ್ಲ ಭಾಷೆಯ ಉಪನ್ಯಾಸಕ ಪ್ರಕಾಶ್ ಆಚಾರ್ಯರವರು ಕಾರ್ಯಕ್ರಮವನ್ನು ನಿರ್ವಹಿಸಿ ಧನ್ಯವಾದ ಸಮರ್ಪಿಸಿದರು.