ಕುಂದಾಪುರ (ನ.14): ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಆಶ್ರಯದಲ್ಲಿ ಕ್ಯಾಂಪಸ್ ಸ್ವಚ್ಛತೆ ಅಭಿಯಾನ ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲ ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್.ಎಸ್.ಎಸ್. ಸಹ ಕಾರ್ಯಕ್ರಮಾಧಿಕಾರಿ ದೀಪಾ ಪೂಜಾರಿ, ಕಾಲೇಜಿನ ಭದ್ರತಾ ಸಿಬ್ಬಂದಿ ರೇಮಂಡ್ ನಜರತ್ ಹಾಗೂ ಎನ್.ಎಸ್.ಎಸ್. ಸ್ವಯಂ ಸೇವಕರು ಉಪಸ್ಥಿತರಿದ್ದರು.