ಕುಂದಾಪುರ (ನ.14): ಕುಂದಾಪುರದಲ್ಲಿ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ.ಬಿ. ಹೆಗ್ಡೆ ಅವರು ಅಗ್ರಪಂಕ್ತಿ ಯಲ್ಲಿ ಗುರುತಿಸಿ ಕೊಂಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ಅವಕಾಶ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ.ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಹೇಳಿದರು.
ಇವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ರೇಷ್ಮಾ ಶೆಟ್ಟಿ ಅವರು ಪ್ರಾಸ್ತಾವಿಸಿ, ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.